ಅತ್ಯಾಚಾರದ ಆರೋಪದಡಿ ಬೆಳ್ತಂಗಡಿಯ ಇಂದಬೆಟ್ಟಿನಲ್ಲಿ ಕೊಲೆ ವ್ಯಕ್ತಿಯೊಬ್ಬರನ್ನು ಹೊಡೆದು ಸಾಯಿಸಿದ ಯುವಕರ ಗುಂಪು!

ಬೆಳ್ತಂಗಡಿ: 4 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಡೆದ ನೈತಿಕ ಪೊಲೀಸ್‌ಗಿರಿಯಲ್ಲಿ ವ್ಯಕ್ತಿಯೊಬ್ಬರನ್ನು ಯುವಕರ ಗೊಂಪೊಂದು ಹೊಡೆದು ಸಾಯಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಆರೋಪದಡಿ ವ್ಯಕ್ತಿಯೊಬ್ಬರಿಗೆ ಗಂಭೀರ ಹಲ್ಲೆ ನಡೆಸುತ್ತಿದ್ದ ವೇಳೆ ಅವರ ರಕ್ಷಣೆಗೆ ಬಂದ ವ್ಯಕ್ತಿ ಇದೀಗ ಪ್ರಾಣ ಬಿಟ್ಟಿದ್ದಾರೆ ಎಂಬುದು ಮಾಹಿತಿ.
ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಇಲ್ಲಿನ ನಿವಾಸಿ ಜಾರಪ್ಪ ನಾಯ್ಕ್ ಎಂಬವರೇ ಈ ರೀತಿ ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ. ಸ್ಥಳೀಯ ನಿವಾಸಿಗಳಾದ ಮನೋಹರ್ , ಚಂದ್ರಕಾಂತ್ ನಾಯ್ಕ್, ದೀಪಕ್ ರೈ, ಹರಿಪ್ರಸಾದ್, ವಿಜಯ್ , ವೈಶಾಲಿ ಮತ್ತಿತರರು ಸೇರಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಪರಾರಿ ನಿವಾಸಿ ನಾರಾಯಣ ನಾಯ್ಕ್(47) ಎಂಬವರಿಗೆ ಶಾಂತಿನಗರ ಆಟದ ಮೈದಾನದಲ್ಲಿ ಯುವಕರ ಗುಂಪು ಅತ್ಯಾಚಾರ ಆರೋಪದಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಇದನ್ನು ಪಕ್ಕದಲ್ಲಿ ನೋಡಿದ ನಾರಾಯಣ ನಾಯ್ಕ್ ಅವರ ಪತ್ನಿಯ ಅಕ್ಕನ ಪತಿ ಜಾರಪ್ಪ ನಾಯ್ಕ್ (55) ತಡೆಯುವ ಪ್ರಯತ್ನ ನಡೆಸಿದ್ದರು. ಈ ವೇಳೆ ಯುವಕರ ತಂಡ ಅವರ ಮೇಲೂ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರೂ ಗಾಯಗೊಂಡು ಬಿದ್ದಿರುವುದರ ಮಾಹಿತಿ ಅರಿತು ಜಾರಪ್ಪ ನಾಯ್ಕ್ ಅವರ ಪುತ್ರ ರಾಜಶೇಖರ್ ಧಾವಿಸಿ ಬಂದು ವಾಹನದಲ್ಲಿ ಗಾಯಾಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ದಾರಿ ಮಧ್ಯೆ ಜಾರಪ್ಪ ನಾಯ್ಕ್ ಸಾವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.

ಇದೀಗ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿ ಸಲಾಗಿದೆ. ಗಾಯಾಳು ನಾರಾಯಣ ನಾಯ್ಕ್ ಅವರನ್ನು ಚಿಕಿತ್ಸೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ವಿವರಗಳಿಗಾಗಿ ಜಯಕಿರಣ ಪತ್ರಿಕೆ ಓದಿರಿ

Leave a Reply

Your email address will not be published. Required fields are marked *