ಬಿಜೆಪಿ ಯುವ ನಾಯಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಸುಳ್ಯ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಗಂಭೀರ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇವರು ಬೆಳ್ಳಾರೆಯಲ್ಲಿ ಕೋಳಿ ಅಂಗಡಿ ವ್ಯಾಪಾರ ಕೂಡ ನಡೆಸುತ್ತಿದ್ದರು ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ದಾಳಿಯಾಗಿದ್ದು, ದಾಳಿ ಮಾಡಿದವರು ಯಾರೆಂದು ಖಚಿತವಾಗಿಲ್ಲ. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೋಲಿಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಜಯಕಿರಣ ಪತ್ರಿಕೆ ಓದಿರಿ

Leave a Reply

Your email address will not be published. Required fields are marked *