ಮಂಗಳೂರು ಸಿಟಿ ಬಸ್ ಸಿಬ್ಬಂದಿ- ಸಂಚಾರಿ ಪೊಲೀಸರ ನಡುವೆ ವಾಗ್ವಾದ !

ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜೆಪ್ಪು ಸಂಚಾರಿ ಠಾಣೆಯ ಎಎಸ್ ಐ ಆಲ್ಬಟ್ ೯ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ . ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್‌ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಎಎಸ್ ಐ ಆಲ್ಬಟ್೯ ಲಸ್ರಾದೋ ತೊಕ್ಕೊಟ್ಟು ಫ್ಲೈಓವರಿನಡಿ ಕಾರೊಂದರಲ್ಲಿ ಸ್ಟಿಕರ್ ಇರುವುದರ ವಿರುದ್ಧ ದಂಡ ಹಾಕಿದ್ದರು. ಆದರೆ ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕರ್ ಇದ್ದು, ಇದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಕಾರು ಮಾಲೀಕ ಸೇರಿದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೊಕ್ಕೊಟ್ಟು ಜಂಕ್ಷನ್ನಿನಲ್ಲೇ ಪ್ರತಿಭಟನೆ ನಡೆಸಿ ಎಎಸ್ ಐ ವಜಾಗೊಳಿಸಲು ಆಗ್ರಹಿಸಿದ್ದರು. ಹೆಚ್ಚಿನ ವಿವರಗಳಿಗಾಗಿ ಜಯಕಿರಣ ಪತ್ರಿಕೆ ಓದಿರಿ

Leave a Reply

Your email address will not be published. Required fields are marked *