ಮಡಿಕೇರಿ: ಜಿಂಕೆ ಚರ್ಮ ಮಾರಾಟ ಯತ್ನ ಓರ್ವನ ಬಂಧನ

ಮಡಿಕೇರಿ: ಅಕ್ರಮವಾಗಿ ಜಿಂಕೆ ಚರ್ಮಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವನನ್ನು ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಆರೋಪಿ ಬಳಿಯಿಂದ 3 ಜಿಂಕೆ ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ.ಗುಡ್ಡೆಹೊಸೂರು-ಸಿದ್ದಾಪುರ ಕಡೆಗೆ ತೆರಳುವ ಮಾರ್ಗದಲ್ಲಿ ಆ.21ರಂದು ಅಲೀಮ್ ಪಾಷಾ ಎಂಬಾತ ಸರಕಾರದ ಪರವಾನಗಿ ಪಡೆಯದೆ ಜಿಂಕೆ ಚರ್ಮಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮಾಹಿತಿ ಅರಿತು ದಾಳಿ ನಡೆಸಿ ಆರೋಪಿ ಸಹಿತ ಜಿಂಕೆ ಚರ್ಮಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.ಸಿಐಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್‍ಚಂದ್ರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಬಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ ಹೆಡ್‍ಕಾನ್ಸ್ಟೇಬಲ್‍ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್ಟೇಬಲ್ ಮಂಜುನಾಥ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *