ಗುರುಪುರ: ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಕುಪ್ಪೆಪದವು:ವ್ಯಕ್ತಿಯೊರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಗುರುಪುರದಲ್ಲಿ ನಡೆದಿದೆ.ವಾಮಂಜೂರು ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ಆತ್ಮಹತ್ಯೆಗೆ ಶರಣಾದವರು. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ಗುರುವಾರ ರಾತ್ರಿ 8:30 ರ ಸುಮಾರಿಗೆ ಗುರುಪುರ ಸೇತುವೆಯ ಮೇಲೆ ತನ್ನ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿದ್ದರು. ವಿಚ್ಛೆಧೀತರಾಗಿರುವ ಅರುಣ್ ಓರ್ವ ಮಗಳನ್ನು ಹೊಂದಿದ್ದಾರೆ. ಅರುಣ್ ನದಿಗೆ ಹಾರುವುದನ್ನು ಕಂಡ ಸ್ಥಳೀಯರು ತಕ್ಷಣ ಪೋಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸರು ಮೃತದೇಹದ ಹುಡುಕಾಟದ ಕಾರ್ಯಾಚರಣೆ ನಡೆಸಿದ್ದರು ಆದರೆ ರಾತ್ರಿಯಾ ದುದರಿಂದ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು .ಶುಕ್ರವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರಿದಿದೆ.