ವರ್ಕಾಡಿಯಲ್ಲಿ ಬೆಂಕಿ ಹಚ್ಚಿ ತಾಯಿಯನ್ನು ಕೊಂದ ಮಗ!, ನೆರೆಮನೆಯ ಮಹಿಳೆಯೂ ಗಂಭೀರ?!

Share on social media

ಹಿಲ್ಡಾ (60) ಮೃತಪಟ್ಟ ಮಹಿಳೆ
ಆರೋಪಿ ಮೇಲ್ವಿನ್ ಮೊಂತೇರೋ (33)

ಮಂಜೇಶ್ವರ: ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿ ಘಟನೆಯಲ್ಲಿ ತಾಯಿ ಸಾವನ್ನಪ್ಪಿದ್ದು ನೆರೆಮನೆಯ ಮಹಿಳೆ ಗಂಭೀರ ಹಲ್ಲೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ. ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯ ಎಸಗಿದ್ದು . ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

(ಜೂನ್ 26 ಗುರುವಾರ) ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಪುತ್ರ ಮೇಲ್ವಿನ್ ಮೊಂತೇರೋ (33) ಈ ಕೃತ್ಯವೆಸಗಿ ಪರಾರಿಯಾಗಿದ್ದಾನೆ. ತಡರಾತ್ರಿ ತಾಯಿಗೆ ಬೆಂಕಿ ಹಚ್ಚಿದ ಬಳಿಕ, ನೆರೆಮನೆಯ ಮಹಿಳೆಯನ್ನು ತಾಯಿಗೆ ಹುಷಾರಿಲ್ಲವೆಂದು ಮನೆಗೆ ಕರೆದ ಬಳಿಕ ಆಕೆಗೂ ಬೆಂಕಿ ಹಚ್ಚಿದ್ದಾನೆ. ತಾಯಿ ಮೃತದೇಹ ಮನೆಯ ಹಿಂಭಾಗದ ಪೊದರುಗಳಡೆಯಲ್ಲಿ ದೊರೆತಿದೆ. ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರವೇ ವಾಸಿಸುತ್ತಿದ್ದು, ಇನ್ನೋರ್ವ ಮಗ ಕೊಲ್ಲಿ ರಾಷ್ಟ್ರದಲ್ಲಿದ್ದಾನೆ. ಆರೋಪಿ ಮೇಲ್ವಿನ್ ಕಟ್ಟಡ ಕಾರ್ಮಿಕನಾಗಿದ್ದು, ಕೊಲೆ ಕೃತ್ಯಕ್ಕೆ ಕಾರಣವೇನೆಂಬುದು ತಿಳಿದು ಬಂದಿಲ್ಲ.ಸ್ಥಳಕ್ಕೆ ಫಾರೆನ್ಸಿಕ್ ತಜ್ಞರು ಹಾಗು ಶ್ವಾನ ದಳ ಆಗಮಿಸಿದ್ದು ಮಂಜೇಶ್ವರ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Advertisements

ವರದಿ : ಜಯಕಿರಣ ಕಾಸರಗೋಡು ಜಿಲ್ಲಾ ವರದಿಗಾರ ರತನ್ ಕುಮಾರ್ ಹೊಸಂಗಡಿ.


Share on social media

Leave a Reply

Your email address will not be published. Required fields are marked *

You cannot copy content of this page